ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು , ಪಕ್ಷದ ಬಲವರ್ಧನೆ ಹಾಗೂ ಮುಂದೆ ಕೈಗೊಳ್ಳಬೇಕಿರುವ ಕಾರ್ಯಕ್ರಮಗಳ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ ಹಾಗೂ ಸೆಲ್ ವಿಭಾಗಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಿ, ಪಕ್ಷದ ಬಲವರ್ಧನೆ ಹಾಗೂ ಮುಂದೆ ಕೈಗೊಳ್ಳಬೇಕಿರುವ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಮಾನ್ಯ ಕಾಂಗ್ರೆಸ್ ಪಕ್ಷದ ಹಾಗೂ ಉಪಮುಖ್ಯಮಂತ್ರಿ ಗಳಾದ ಸನ್ಮಾನ್ಯ ಡಿ.ಕೆ.ಶಿವಕುಮಾರ್ ಅವರು ಹಾಜರಿದ್ದರು..
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸಚಿವರಾದ ಶ್ರೀ ಎನ್ .ಎಸ್ ಭೋಸರಾಜು ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸಚಿವರಾದ ಶ್ರೀ ಎನ್ .ಎಸ್ ಭೋಸರಾಜು ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಶ್ರೀ ಎನ್ .ಎಸ್ ಭೋಸರಾಜು ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವಳದ ವತಿಯಿಂದ ಸಚಿವರನ್ನು ಗೌರವಿಸಲಾಯಿತು. ಈ ವೇಳೆ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ , ಸದಸ್ಯರಾದ ರಾಜೇಶ ಕಾರಂತ್ , ಧನಾಕ್ಷಿ ಪೂಜಾರಿ, ಸುಧಾ ಕೆ. ಮೊಗವೀರ ಹಾಗೂ ದೇವಳದ ಕಾರ್ಯನಿರ್ವಾಣಾಧಿಕಾರಿ ಪ್ರಶಾಂತ್ ಶೆಟ್ಟಿ ಮತ್ತು ಮಾಜಿ ಶಾಸಕರಾದ ಕೆ ಗೋಪಾಲ ಪೂಜಾರಿ , ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್ ರಾಜು ಪೂಜಾರಿ , ಬ್ಲಾಕ್ ಕಾಂಗ್ರೆಸ್ ಬೈಂದೂರು ಅಧ್ಯಕ್ಷರಾದ ಅರವಿಂದ ಪೂಜಾರಿ, ಬ್ಲಾಕ್ ಕಾಂಗ್ರೆಸ್ ವಂಡ್ಸೆ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ ಹಾಗೂ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.